ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಹಾಸನ : ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
50 ವರ್ಷದ ಸೋಮಣ್ಣ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಯಶ್ವಂತ್ ಕೊಲೆ ಆರೋಪಿಯಾಗಿದ್ದಾನೆ.
ಕುಡಿತ ಮತ್ತಿನಲ್ಲಿ ಪರಸ್ಪರ ಜಗಳವಾಡಿದ್ದು, ಅದು ವಿಕೋಪಕ್ಕೆ ತಿರುಗಿ ಯಶ್ವಂತ್ ಕೊಡಲಿಯಿಂದ ಸೋಮಣ್ಣನ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಕೊಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಕೊಲೆಯ ಬಳಿಕ ಯಶ್ವಂತ್ ಹಳೇಬೀಡು ಪೊಲೀಸರಿಗೆ ಶರಣಾಗಿದ್ದಾರೆ.









