ಕೊರೊನಾ ಹೆಚ್ಚಾದರೆ ಶಾಲಾ-ಕಾಲೇಜುಗಳಿಗೆ ರಜೆ ಅನಿವಾರ್ಯ
ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ.
ಜಿಲ್ಲೆಯಲ್ಲಿ ಸದ್ಯ 26.22 ಪಾಸಿಟಿವಿಟಿ ದರ ಇದೆ. ಕೊರೊನಾ ಹೆಚ್ಚುತ್ತಿರುವುದು ಗಂಭೀರವಾದ ಸಂಗತಿಯಾಗಿದೆ.
ಹಾಸನ ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ.
ಸೋಂಕು ಹೆಚ್ಚಿರುವ ಕಾಲೇಜುಗಳಿಗೆ ಒಂದು ವಾರ ರಜೆ ನೀಡಲಾಗಿದೆ.
ಇನ್ನೂ ಮೂರ್ನಾಲ್ಕು ದಿನಗಳ ಪ್ರಕರಣ ಆಧರಿಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಇನ್ನು ಜಿಲ್ಲೆಯಲ್ಲಿ 4000 ಸೋಂಕಿತರು ಹೋಂ ಐಸೋಲೇಷನ್ ನಲ್ಲಿದ್ದಾರೆ, 377 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರತಿನಿತ್ಯ 4000 ರಿಂದ 5000 ಪಾಸಿಟಿವ್ ಕೇಸ್ ಗಳು ಬರುವ ಸಾಧ್ಯತೆಯಿದೆ.
ಕೊರೊನಾ ಹೆಚ್ಚಾದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯವಾಗುತ್ತದೆ.
ಪ್ರತಿನಿತ್ಯ 5000 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.
ನಿನ್ನೆ 6,600 ಮಂದಿಗೆ ಟೆಸ್ಟ್ ಮಾಡಲಾಗಿದ್ದು, ಇನ್ನೂ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.









