ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ..!! B S Yediyurappa granddaughter commited suicide
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಯಡಿಯೂರಪ್ಪ ನವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಕ ಕಲಹದಿಂದಾಗಿ ಸೌಂದರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆ ಆಗಿರುವ ಸೌಂದರ್ಯ ಕಳೆದ ವರ್ಷ ಮದುವೆಯಾಗಿದ್ದರು.
ಇಂದು ಬೆಳಿಗ್ಗೆ ಪತಿ ಕೆಲಸಕ್ಕೆ ತೆರಳಿದ ನಂತರ ಅವರು ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಯಡಿಯೂರಪ್ಪನವರು ಆಸ್ಪತ್ರೆ ಕಡೆಗೆ ತೆರಳಿದ್ದಾರೆ.
ಇತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದ್ದಾರೆ .