ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕಿ
ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಬಾಸುಂಡೆ TEACHER BEAT TO STUDENT IN KARWAR
ಉತ್ತರ ಕನ್ನಡ ಜಲ್ಲೆಯ ಹೊನ್ನಾವರದಲ್ಲಿ ಘಟನೆ
ಶಿಕ್ಷಕಿ ವಿರುದ್ಧ ವಿದ್ಯಾರ್ಥಿ ಪೋಷಕರ ಆಕ್ರೋಶ
ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ
ಉತ್ತರ ಕನ್ನಡ : ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟ ಕಾರಣಕ್ಕೆ ಶಾಲಾ ಶಿಕ್ಷಕಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ.
ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆರನೇ ತರಗತಿ ವಿದ್ಯಾರ್ಥಿ, ತನ್ನ ತರಗತಿಯ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದಾನೆ.
ಇದರಿಂದ ಕೋಪಗೊಂಡ ಶಿಕ್ಷಕಿ ಕಲ್ಪನಾ ಹೆಗಡೆ, ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿದ್ದಾರೆ.
ಈ ವಿಚಾರ ವಿದ್ಯಾರ್ಥಿಯ ಪೋಷಕರಿಗೆ ಗೊತ್ತಾಗಿದ್ದು, ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಶಿಕ್ಷಕಿ ಕಲ್ಪನಾ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ.