Chikkamagalore | ಆಸ್ತಿಗಾಗಿ ಎರಡು ಕುಟುಂಬದ ನಡುವೆ ಮಾರಾಮಾರಿ Fight between two families for the property chikkamagalore
ಚಿಕ್ಕಮಗಳೂರು : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬದ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮದಲ್ಲಿ ನಡೆದಿದೆ.
ಮೇಘನಾ ಎಂಬುವವರು ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದಾರೆ. ಪತಿ ನಿಧನರಾದ ಬಳಿಕ ಆಸ್ತಿ ವಿಚಾರವಾಗಿ ಮೇಘನಾ ಅವರ ಪತಿಯ ಮನೆಯವರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆಸ್ತಿ ವಿವಾದ ಕಾರಣ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಮಹಿಳೆಯರು, ಮಕ್ಕಳ ಚೀರಾಟ, ಕಿರುಚಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿವೆ.
ಪತಿ ನಿಧನರಾದ ಬಳಿಕ ಮಾವನ ಮನೆಯಿಂದ ತನ್ನ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಮೇಘನಾ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಆದ್ರೆ ಇದಕ್ಕೆ ಪೊಲೀಸರು ಸ್ಪಂದಿಸಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.