ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Latha Mangeshkar : ಸಿನಿಮಾರಂಗದಲ್ಲಿ ಲತಾ ಮಂಗೇಶ್ಕರ್ ಜರ್ನಿ..

Mahesh M Dhandu by Mahesh M Dhandu
February 6, 2022
in Cinema, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Latha Mangeshkar : ಸಿನಿಮಾರಂಗದಲ್ಲಿ ಲತಾ ಮಂಗೇಶ್ಕರ್ ಜರ್ನಿ..

ನವದೆಹಲಿ :  ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಫಲಿಸಲೇ ಇಲ್ಲ.. ಇಂದು ಭಾರತೀಯರ ಪಾಲಿಗೆ ಕರಾಳ ದಿನ..

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಭಾರತೀಯ ಸಿನಿಮಾರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.  ಜನವರಿ 9 ರಂದು ಅವರಿಗೆ ಕೋವಿಡ್-19 ಪಾಸಿಟಿವ್ ಬಂದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು,..

latha mangeshkar - saakshatv

ಮೊದಲ ದಿನದಿಂದಲೇ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತಿತ್ತು.. ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಭಾಜನರಾದ ಭಾರತದ ನೈಟಿಂಗಲ್ ಲತಾ ಮಂಗೇಶ್ಕರ್ ಅವರು ಸುಮಾರು 30 ಕ್ಕೂ ಅಧಿಕ ಭಾಷೆಗಳ ಹಾಡುಗಳಿಗೆ ಧ್ವನಿಯಾಗಿದ್ದಾರೆ..

ಹಿಂದಿ ಹೊರತಾಗಿ ಕನ್ನಡ , ಮರಾಠಿ ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಸಂಗೀತ ಕುಟುಂಬಕ್ಕೆ ಸೇರಿದವರಾದ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಸಿನಿಮಾಗಳನ್ನೂ  ನಿರ್ಮಿಸಿದ್ದಾರೆ.

1929 ರಲ್ಲಿ  ಲತಾ ಮಂಗೇಶ್ಕರ್ ಅವರು ಜನಿಸಿದರು. ಅವರ ತಂದೆ  ಪಂಡಿತ್ ದೀನನಾಥ್ ಮಂಗೇಶ್ಕರ್ ಶಾಸ್ತ್ರೀಯ ಸಂಗೀತಗಾರರಾಗಿದ್ದರು. ಲತಾ ಮಂಗೇಶ್ಕರ್ ಅವರಿಗೆ ಬಾಲ್ಯದಲ್ಲಿ  ಸಂಗೀತ ಪಾಠ  ಮಾಡಿದ್ದರು.

latha mangeshkar - saakshatv

1942 ರಲ್ಲಿ, ಅವರ ತಂದೆ ನಿಧನರಾದಾಗ, ಲತಾ ಮಂಗೇಶ್ಕರ್ ಅವರಿಗಿನ್ನೂ 13 ವರ್ಷವಾಗಿತ್ತು.  1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ಆಯೇಗಾ ಆನೇವಾಲಾ ಹಾಡಿನಲ್ಲಿ  ಮಂಗೇಶ್ಕರ್ ಅವರು ಆರಂಭಿಕ ಹಿಟ್ ಕೊಟ್ಟರು.

ಅಲ್ಲಿಂದ ಲತಾ ಮಂಗೇಶ್ಕರ್ ಅವರು ತಮ್ಮ ವೃತ್ತಿ ಜೀವನದಲ್ಲಿ ಹಿಂದುವರಿಗಿ ನೋಡಿಯೇ ಇಲ್ಲ..  ಮಧುಮತಿಯಲ್ಲಿನ ಸಲೀಲ್ ಚೌಧರಿಯವರ  ಹಾಡುಗಳಿಗೆ ಲತಾ ಅವರು ಧ್ವನಿಯಾಗಿದ್ದರು. ಈ ಹಾಡಿಗಾಗಿ  ಅತ್ಯುತ್ತಮ ಹಿನ್ನೆಲೆ ಗಾಯಕಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಪಡೆದರು. ಬೀಸ್ ಸಾಲ್ ಬಾದ್, ಖಂಡನ್ ಮತ್ತು ಜೀನೆ ಕಿ ರಾಹ್  ನಲ್ಲಿ ಹಾಡಿದ ಹಾಡುಗಳಿಗೂ  ಇನ್ನೂ ಮೂರು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡರು.

ಪರಿಚಯ, ಕೋರಾ ಕಾಗಜ್ ಮತ್ತು ಲೇಕಿನ್ ಚಿತ್ರಗಳಿಗಾಗಿ ಲತಾ ಮಂಗೇಶ್ಕರ್ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಪಾಕೀಜಾ, ಅಭಿಮಾನ್, ಅಮರ್ ಪ್ರೇಮ್, ಆಂಧಿ, ಸಿಲ್ಸಿಲಾ, ಚಾಂದಿನಿ, ಸಾಗರ್, ರುಡಾಲಿ ಮತ್ತು ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ ಸಿನಿಮಾಗಳಲ್ಲೂ ಅವರ ಅವಿಸ್ಮರಣೀಯ ಕೊಡುಗೆ ಇದೆ.

Lata Mangeshkar : ಮೌನವಾಯ್ತು ಗಾನ ಕೋಗಿಲೆ..

Lata Mangeshkar: ಇಹಲೋಕ ತ್ಯಜಿಸಿದ ಲತಾ  ಮಂಗೇಶ್ಕರ್ | ಪ್ರಧಾನಿ ಸಂತಾಪ

Tags: #saakshatvBollywoodlatha mangeshkarsinger v
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram