ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bengalore | ಮಾ.10ಕ್ಕೆ ವಸತಿ ಇಲಾಖೆಯ 900 ಮನೆಗಳ ಹಂಚಿಕೆ :  ವಿ. ಸೋಮಣ್ಣ

Mahesh M Dhandu by Mahesh M Dhandu
February 9, 2022
in Hale Mysore, Newsbeat, ಹಳೇ ಮೈಸೂರು
bengalore- minister v somanna Inspection of multi-storey buildings saaksha tv
Share on FacebookShare on TwitterShare on WhatsappShare on Telegram

Bengalore | ಮಾ.10ಕ್ಕೆ ವಸತಿ ಇಲಾಖೆಯ 900 ಮನೆಗಳ ಹಂಚಿಕೆ :  ವಿ. ಸೋಮಣ್ಣ

ಬೆಂಗಳೂರು: ಯಲಹಂಕ ವಿಧಾನ ಸಭಾ ಕ್ಷೇತ್ರದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 900 ಮನೆಗಳನ್ನು ಮಾ.10 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಇಂದು ಯಲಹಂಕದ ಸಾದೇನಹಳ್ಳಿ, ಅಗ್ರಹಾರಪಾಳ್ಯ ಮತ್ತು ಪಿಲ್ಲಹಳ್ಳಿಗಳಲ್ಲಿ ನಿರ್ಮಿಸಲಾಗುತ್ತಿರುವ ಬಹುಮಹಡಿ ಕಟ್ಟಡಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸೂರಿಲ್ಲದವರಿಗೆ ಸೂರು’ ಎಂಬ ಧ್ಯೇಯದಡಿ 2016-17 ಮತ್ತು 2017-18 ರಲ್ಲಿ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಗೆ 600 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದರು.

ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ನಂತರ ಬೆಂಗಳೂರು ನಗರ ಮತ್ತು ನಗರ ಜಿಲ್ಲೆಯಲ್ಲಿ 535 ಎಕರೆ ಪ್ರದೇಶವನ್ನು ಸ್ವಾಧೀನ ಮಾಡಿಕೊಂಡಿದ್ದು, 46 ಸಾವಿರ ಮನೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಯಲಹಂಕದಲ್ಲಿ 900 ಮನೆಗಳನ್ನು ನಿರ್ಮಿಸುವ ಕಾರ್ಯ ಅತಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದರು.

ಮುಖ್ಯಮಂತ್ರಿಗಳು ಯಲಹಂಕ ಕ್ಷೇತ್ರದ ಮೂರು ಸ್ಥಳದಲ್ಲಿ ನಿರ್ಮಿಸಲಾದ 900ಕ್ಕೂ ಅಧಿಕ ಮನೆಗಳನ್ನು ಮಾ.11ರಂದು ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಂಚಿಕೆ ಮಾಡಲಿದ್ದಾರೆ ಎಂದ ಅವರು, ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ 46 ಸಾವಿರ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಅರ್ಹ ಬಡವರಿಗೆ ವಿತರಿಸಲಾಗುತ್ತದೆ ಎಂದರು.

ಯಲಹಂಕ ಕ್ಷೇತ್ರದಲ್ಲಿ 15 ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಉಳಿದಂತೆ 54 ಸಾವಿರ ಮನೆಗಳ ನಿರ್ಮಾಣ ಕಾರ್ಯಗಳನ್ನು ಶೀಘ್ರ ಕೈಗೊಂಡು ವಸತಿ ಇಲ್ಲದವರಿಗೆ ಸೂರು ಒದಗಿಸಲಾಗುವುದು ಎಂದು ತಿಳಿಸಿದರು.

bengalore- minister v somanna Inspection of multi-storey buildings saaksha tv

5 ಲಕ್ಷ ರೂ.ಗೆ ಸ್ವಂತ ಮನೆ:
ವಸತಿ ಇಲಾಖೆ ನಿರ್ಮಿಸುತ್ತಿರುವ ಮನೆಗಳನ್ನು ಕೂಲಿ ಕಾರ್ಮಿಕರು, ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು, ಬೀಡಿ ಕಟ್ಟುವವರು, ಬೀದಿ ಬದಿ ವ್ಯಾಪಾರಿಗಳು ಸೇರಿ ಅರ್ಹ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಜನರು ರೂ.5.5 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 5 ಲಕ್ಷ ರೂ. ಪಾವತಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದವರು 1 ಲಕ್ಷ ರೂ. ಕಟ್ಟಿದ್ದಾರೆ. ಉಳಿದ ಹಣವನ್ನು ವಸತಿ ಇಲಾಖೆ ಸೂಚಿಸಿದ ಬ್ಯಾಂಕ್‌ಗಳಿಗೆ ಹಣ ಪಾವತಿಸಬೇಕು. ಬ್ಯಾಂಕ್‌ನಲ್ಲಿ ಸಾಲ ಸೌಲಭ್ಯ ಒದಗಿಸಲು ಶೇ.6 ರೂ. ಬಡ್ಡಿ ದರದಲ್ಲಿ ಕೆಲವು ಬ್ಯಾಂಕ್‌ಗಳಲ್ಲಿ ಮನವಿ ಮಾಡಲಾಗಿದೆ. ಸಾಲ ತೀರಿಸುವ ಅವಧಿಯನ್ನು ಕಂತಿನ ಆಧಾರದಲ್ಲಿ 20 ವರ್ಷಗಳ ಅವಧಿಯನ್ನು ನೀಡುವಂತೆ ಬ್ಯಾಂಕ್‌ನಲ್ಲಿ ಮನವಿ ಮಾಡಲಾಗಿದೆ ಎಂದರು..

5 ಲಕ್ಷ ಮನೆ ಮಾರಾಟ ಬೇಡ:
ಮನೆ ಖರೀದಿಗೆ ವಾರ್ಷಿಕ ಆದಾಯ 87 ಸಾವಿರ ರೂ. ಗಳಿಗೆ ನಿಗದಿ ಮಾಡಲಾಗಿತ್ತು. ಆದರೆ, ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ನಂತರ ವಾರ್ಷಿಕ ಆದಾಯ 3 ಲಕ್ಷ ರೂ ಇದ್ದವರೂ ವಸತಿ ಮನೆ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರು ಎಂದು ಆದೇಶಿಸಿದ್ದಾರೆ. ಆದ್ದರಿಂದ ನಗರದಲ್ಲಿ 1 ಮನೆಗಳನ್ನು ನಿರ್ಮಿಸುವ ಮೂಲಕ ಬಿಜೆಪಿ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ. ಇನ್ನು ವಸತಿ ಮನೆಗಳನ್ನು ಖರೀದಿ ಮಾಡಿದವರು ಕನಿಷ್ಠ 5 ವರ್ಷ ಯಾರಿಗೂ ಮಾರಾಟ ಮಾಡಬಾರದು. ಒಂದು ಕುಟುಂಬಕ್ಕೆ ಒಂದೇ ಮನೆ ನೀಡಲಾಗುತ್ತದೆ. ಆಧಾರ್ ಕಾರ್ಡ್ ಜೋಡಣೆಯಿಂದ ಎಲ್ಲ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಲಿದೆ. ಒಂದು ವೇಳೆ ಯಾವುದೇ ಕುಟುಂಬದ ಸದಸ್ಯರು ಒಂದಕ್ಕಿಂತ ಹೆಚ್ಚು ಮನೆಗಳನ್ನು ಖರೀದಿಗೆ ಅರ್ಜಿ ಸಲ್ಲಿಸಿದಲ್ಲಿ ಅವರ ಹಣ ಮತ್ತು ಮನೆ ಎರಡನ್ನೂ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ , ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಡಾ. ಎಸ್.ಬಸವರಾಜು , ಮುಖ್ಯ ಅಭ್ಯಂತರರು ಸಣ್ಣ ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.

Tags: #bengalore#Saaksha TVkarnatakav somanna
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram