ಹಿರಿಯ ನಟ ರಾಜೇಶ್ ಪಾರ್ಥಿವ ಶರೀರದ ದರ್ಶನ ಪಡೆದ ಸಿದ್ದರಾಮಯ್ಯ Siddaramaiah condolence to senior actor rajesh death saaksha tv
ಬೆಂಗಳೂರು : ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ರಾಜೇಶ್ ಅವರು ಇಂದು ಕೊನೆಯುಸಿರೆಳೆದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಅಲ್ಲದೇ ರಾಜೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದ್ದಾರೆ.
ಇನ್ನು ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ, ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ.
ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು.
ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.









