Bangalore | ನಟ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ವಿಧಿವಶ
ರವಿಚಂದ್ರನ್ ತಾಯಿ ಕೊನೆಯುಸಿರು
ಪಟ್ಟಮ್ಮಾಳ್ ವೀರಸ್ವಾಮಿ ವಿಧಿವಶ
ಬೆಳಿಗ್ಗೆ 6.30ರ ಸುಮಾರಿಗೆ ಕೊನೆಯುಸಿರು
ಸ್ಯಾಂಡಲ್ ವುಡ್ ತಾರೆಯರಿಂದ ಕಂಬನಿ
ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಬೆಳಗ್ಗೆ 6.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಉಸಿರು ನಿಲ್ಲಿಸಿದ್ದಾರೆ.
ಅಲ್ಲಿಂದ ಬೆಳಗ್ಗೆ 10.30ಕ್ಕೆ ಪಟ್ಟಮ್ಮಾಳ್ ಅವರ ಪಾರ್ಥಿವ ಶರೀರವನ್ನ ರಾಜಾಜಿನಗರದ ನಿವಾಸಕ್ಕೆ ತರಲಾಯಿತು. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್ ಕುಟುಂಬದವರು ತಿಳಿಸಿದ್ದಾರೆ. ಇನ್ನು ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಪಟ್ಟಮ್ಮಾಳ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ಕುಟುಂಬದವರು ಅಪಾರ ಕೊಡುಗೆ ನೀಡಿದ್ದಾರೆ. ರವಿಚಂದ್ರನ್ ತಂದೆ ವೀರಾಸ್ವಾಮಿ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿ ಜನಪ್ರಿಯರಾಗಿದ್ದರು. ಹಾಗಾಗಿ ಈ ಕುಟುಂಬದ ಮೇಲೆ ಎಲ್ಲರಿಗೂ ಅಪಾರ ಪ್ರೀತಿ, ಗೌರವ ಇದೆ. Ravichandran mother Pattammal Veeraswamy death in Bengaluru









