Aishwaryaa Rajinikant | ರಜಿನಿ ಪುತ್ರಿ ಮತ್ತೆ ಆಸ್ಪತ್ರೆಗೆ ದಾಖಲು
ತಮಿಳುನಾಡು : ಇತ್ತೀಚೆಗಷ್ಟೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ನಟ ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಜ್ವರ ಹಾಗೂ ತಲೆ ಸುತ್ತಿವಿಕೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಐಶ್ವರ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಅಲ್ಲದೇ ‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಅಂತಾ ತಿಳಿಸಿದ್ದಾರೆ.
ಜೊತೆಗೆ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.
ಅಂದಹಾಗೆ ಐಶ್ವರ್ಯಾ ಕಳೆದ ತಿಂಗಳು ಕೊವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಬಳಿಕ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.
ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.
Aishwaryaa Rajinikant again admitted to hospital









