Women’s Day | ತಾಯಿಯ ಎದೆಹಾಲಿಗಿಂತ ಅಮೃತ ಬೇರೆ ಇಲ್ಲ
ಬೆಂಗಳೂರು : ತಾಯಿಯ ಎದೆಹಾಲಿಗಿಂತ ಅಮೃತ ಬೇರೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಬಿಎಂಸಿಆರ್ ಐನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ. ಕೆ. ಸುಧಾಕರ್ ಅವರು ಎದೆಹಾಲು ಬ್ಯಾಂಕ್ ಹಾಗೂ ಗರ್ಭಿಣಿಯರ ತುರ್ತು ಚಿಕಿತ್ಸಾ ವಾಡ್೯ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸುಧಾಕರ್, ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ದಿನವೇ ಮಿಲ್ಕ್ ಬ್ಯಾಂಕ್ ಅಮೃತಧಾರೆಗೆ ಚಾಲನೆ ಸಿಕ್ಕಿರುವುದು ಅರ್ಥಪೂರ್ಣ.
ತಾಯಿಯ ಎದೆಹಾಲಿಗಿಂತ ಅಮೃತ ಬೇರೆ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದ ಒಟ್ಟು 4 ಕಡೆ ಎದೆ ಹಾಲು ಸಂಗ್ರಹಿಸುವ ಕೇಂದ್ರವಿದೆ ಎಂದು ಮಾಹಿತಿ ನೀಡಿದ ಸಚಿವರು, ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ವ್ಯವಸ್ಥೆ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿದೆ. ಈ ಮೂಲಕ ಅನೇಕ ಮಕ್ಕಳಿಗೆ ಸಹಾಯವಾಗಲಿದೆ ಎಂದರು.
ಮಹಿಳೆಯರಿಗೆ ವಿಶೇಷ ಸ್ಥಾನ ನೀಡಿದ ನಮ್ಮ ದೇಶ ಜಗತ್ತಿಗೆ ಮಾದರಿಯಾಗಿದೆ.
ಮಾತೃ ವಂದನಾ, ನಗು-ಮಗು, ಜನನಿ ಸುರಕ್ಷಾ ಹೀಗೆ ಹಲವು ಯೋಜನೆಗಳ ಮೂಲಕ ಮಹಿಳೆಯರಿಗೆ ನೆರವು ನೀಡಲಾಗುತ್ತಿದೆ.
ಮಕ್ಕಳಿಗೆ ಎದೆ ಹಾಲು ಉಣಿಸುವುದು ಮುಖ್ಯ. ವಿಶೇಷ ಪ್ರಕರಣಗಳಲ್ಲಿ ಹಾಲು ಉಣಿಸುವ ಶಕ್ತಿ ಕೆಲವರಿಗೆ ಇರುವುದಿಲ್ಲ.
ಇಂತಹ ಸಂದರ್ಭದಲ್ಲಿ ಮಿಲ್ಕ್ ಬ್ಯಾಂಕ್ ಮೂಲಕ ಸಂಗ್ರಹಣೆಯಾಗುವ ಹಾಲು ಮಕ್ಕಳಿಗೆ ನೆರವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
INISTER DR DOT SUDHAKAR INAUGURATES AMRITADHARE BREAST MILK BANK