ICC Test Rankings | ಧೂಳೆಬ್ಬಿಸಿದ ಅಯ್ಯರ್.. ಬೂಮ್ರಾ
ಟೀಂ ಇಂಡಿಯಾ ಬೌಲರ್ ಜಸ್ ಪ್ರೀತ್ ಬುಮ್ರಾ ಹಾಗೂ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಧೂಳೆಬ್ಬಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ನಲ್ಲಿ ಬುಮ್ರಾ ಎರಡು ಇನ್ನಿಂಗ್ಸ್ಗಳಲ್ಲಿ 8 ವಿಕೆಟ್ ಪಡೆದರು. ಅಯ್ಯರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.
ಇದರೊಂದಿಗೆ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ 40 ಸ್ಥಾನ ಮೇಲೇರಿ 37ನೇ ಸ್ಥಾನಕ್ಕೆ ತಲುಪಿದ್ದಾರೆ.
ಬೌಲರ್ಗಳ ಶ್ರೇಯಾಂಕದಲ್ಲಿ ಬುಮ್ರಾ 830 ಅಂಕಗಳೊಂದಿಗೆ ಆರು ಸ್ಥಾನ ಮೇಲೇರಿ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.
ಶಾಹಿನ್ ಅಫ್ರಿದಿ, ಕೈಲ್ ಜೇಮಿಸನ್, ಟಿಮ್ ಸೌಥಿ, ಜೇಮ್ಸ್ ಆಂಡರ್ಸನ್, ನೀಲ್ ವ್ಯಾಗ್ನರ್ ಮತ್ತು ಜೋಶ್ ಹ್ಯಾಜಲ್ವುಡ್ ಕ್ರಮವಾಗಿ ಐದರಿಂದ 10ನೇ ಶ್ರೇಯಾಂಕದಲ್ಲಿದ್ದಾರೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನ (850 ಅಂಕ) ಉಳಿಸಿಕೊಂಡಿದ್ದಾರೆ.
ಪ್ಯಾಟ್ ಕಮಿನ್ಸ್ (892 ಅಂಕ) ಮೊದಲ ಸ್ಥಾನದಲ್ಲಿದ್ದರೆ, ಕಗಿಸೊ ರಬಾಡ (835 ಅಂಕ) ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಬ್ಯಾಟಿಂಗ್ ರ್ಯಾಂಕಿಂಗ್ ವಿಚಾರಕ್ಕೆ ಬಂದರೆ ಕೊಹ್ಲಿ ಸ್ಥಾನ ಮತ್ತಷ್ಟು ಹದಗೆಟ್ಟಿದೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ನಲ್ಲಿ 45, ಎರಡನೇ ಟೆಸ್ಟ್ ನಲ್ಲಿ 23 ಮತ್ತು 13 ರನ್ ಗಳಿಸಿದ್ದ ಕೊಹ್ಲಿ 742 ಅಂಕಗಳೊಂದಿಗೆ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ನಾಯಕ ರೋಹಿತ್ ಶರ್ಮಾ 754 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಮಾರ್ನಸ್ ಲಬುಶೆನ್ 936 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ನಾಯಕ ಜೋ ರೂಟ್ 872 ಅಂಕಗಳೊಂದಿಗೆ 2ನೇ ಸ್ಥಾನ ಮತ್ತು ಸ್ಟೀವ್ ಸ್ಮಿತ್ 851 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಸಿಡಿಸಿದ ಶ್ರೀಲಂಕಾ ನಾಯಕ ದಿಮುತ್ ಕರುಣರತ್ನೆ ಮೂರು ಸ್ಥಾನ ಮೇಲೇರಿ 781 ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ತಲುಪಿದ್ದಾರೆ.









