Bangalore | ಸಿಎಂ ಬೊಮ್ಮಾಯಿ ಮುಂದೆ ವಿಷ ಕುಡಿಯಲು ಯತ್ನ
ಬೆಂಗಳೂರು : ನಿವೇಶನ ವಿಚಾರದಲ್ಲಿ ಪೊಲೀಸರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರು ವೃದ್ಧನೋರ್ವ ವಿಷ ಕುಡಿಯಲು ಯತ್ನಿಸಿದ್ದಾರೆ.
ಬೆಂಗಳೂರು ನಗರದ ಸುಂಕದಕಟ್ಟೆ ಸಿವಾಸಿ ಚಂದ್ರಶೇಖರ್ ಎಂಬುವವರು ಜನತಾದರ್ಶನದಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದರು.
ಈ ವೇಳೆ ನನಗೆ ಪೊಲೀಸರಿಂದ ಅನ್ಯಾಯವಾಗಿದೆ. ಪೊಲೀಸರು ಕೆಲವರ ಜೊತೆ ಸೇರಿ ಸೈಟ್ ಮಾರಾಟದಲ್ಲಿ ಲಕ್ಷಾಂತರ ರೂ. ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿದ ವೃದ್ಧ, ನ್ಯಾಯ ಕೊಡಿಸುವಂತೆ ಎಂದು ಸಿಎಂ ಬಳಿ ಮನವಿ ಮಾಡಿಕೊಂಡರು.
ಅಲ್ಲದೇ ನಾನು ಸಾಕಷ್ಟು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ, ಎನ್ನುತ್ತಲೇ ವಿಷದ ಬಾಟಲಿ ತೆಗೆದು ಕುಡಿಯಲು ಯತ್ನಿಸಿದರು.
ಈ ವೇಳೆ ಅಲ್ಲಿದ್ದ ಪೊಲೀಸರು ಆ ವೃದ್ಧನನ್ನು ತಡೆದು, ಸ್ವಲ್ಪ ದೂರಕ್ಕೆ ಕರೆದೊಯ್ದರು. ಆಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. A OLD MAN TRIED TO DRINK POISON IN FRONT OF CM BOMMAI









