Bellary | ಸಾವಿನಲ್ಲೂ ಒಂದಾದ ತಾಯಿ-ಮಗ!
ಬಳ್ಳಾರಿ : ತಾಯಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಮಗ ಕೂಡ ಕೊನೆಯುಸಿರೆಳೆದಿರುವ ಘಟನೆ ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿಯಲ್ಲಿ ನಡೆದಿದೆ.
ಬುಧವಾರ ವಯೋಸಹಜ ಕಾಯಿಲೆಯಿಂದ 93 ವರ್ಷದ ನಾಗಮ್ಮ ಸಾವನ್ನಪ್ಪಿದರು.
ತಾಯಿಯ ಸಾವಿನ ಸುದ್ದಿ ತಿಳಿದ ಕೆಲವೇ ಕ್ಷಣಗಳಲ್ಲಿ ಮಗ ಕರಿಯಪ್ಪ(48) ಸಹ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ವಯೋ ಸಹಜ ಕಾಯಿಲೆಯಿಂದಾಗಿ ಬುಧವಾರ ಸಂಜೆ ನಾಗಮ್ಮ ಅವರು ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಈ ವೇಳೆ ಭಜನೆ ಮಾಡುತ್ತಾ ಮಾಡುತ್ತಾ ನಾಗಮ್ಮನ ಮಗ ಕರಿಯಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಬ್ಬರನ್ನೂ ಅಕ್ಕಪಕ್ಕದಲ್ಲಿ ಮಣ್ಣು ಮಾಡಲಾಗಿದೆ. Son died within hours of aged mother death in paramadevanahalli village in bellary