ಅಂತರಾಷ್ಟ್ರೀಯ ಕ್ರಿಕೆಟ್ ಗೆ ಸ್ಟಾರ್ ಕ್ರಿಕೆಟರ್ ಗುಡ್ ಬೈ
ದಕ್ಷಿಣ ಆಫ್ರಿಕಾದ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಗ್ನಾನ್ ಡು ಪ್ರೀಜ್ ಏಕದಿನ ಮತ್ತು ಟೆಸ್ಟ್ ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ.
ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡು ಪ್ರೀಜ್ ಹೇಳಿದ್ದಾರೆ.
“ನಾನು ಇಲ್ಲಿಯವರೆಗೆ ನಾಲ್ಕು ಏಕದಿನ ವಿಶ್ವಕಪ್‌ಗಳಲ್ಲಿ ಆಡಿರೋದು ನನ್ನ ಅದೃಷ್ಟ. ಇವು ನನ್ನ ಜೀವನದ ಅತ್ಯಮೂಲ್ಯ ನೆನಪುಗಳು.
ಆದರೆ ನಾನು ನನ್ನ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ. ಅದಕ್ಕಾಗಿಯೇ ಈ ನಿರ್ಧಾರ ಕೈಗೊಂಡಿದ್ದೇನೆ.
ಅದೇ ರೀತಿ ಕ್ರಿಕೆಟ್ ಸೌತ್ ಆಫ್ರಿಕಾ ಮತ್ತು ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಡು ಪ್ರೀಜ್ ಕ್ರಿಕೆಟ್ ಸೌತ್ ಆಫ್ರಿಕಾ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಏಕೈಕ ಮಹಿಳಾ ಕ್ರಿಕೆಟಿಗ ಕೂಡ ಡು ಪ್ರೀಜ್.
ತನ್ನ ಏಕದಿನ ವೃತ್ತಿಜೀವನದಲ್ಲಿ 154 ಪಂದ್ಯಗಳನ್ನು ಆಡಿರುವ ಡು ಪ್ರೀಜ್ 3760 ರನ್ ಗಳಿಸಿದ್ದಾರೆ.
ಅವರು ತಮ್ಮ ವೃತ್ತಿಜೀವನದಲ್ಲಿ 18 ಅರ್ಧಶತಕ ಮತ್ತು 2 ಶತಕಗಳನ್ನು ಸಿಡಿಸಿದ್ದಾರೆ.
ಡು ಪ್ರೀಜ್ ಅವರು 2011 ರಿಂದ 2016 ರವರೆಗೆ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿದ್ದರು. mignon-du-preez-announces-retirement









