HDK vs Siddaramaiah | ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ
ಬೆಂಗಳೂರು : ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಇದಕ್ಕೆ ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ.
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ #ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ ಎಂದು ಕುಟುಕಿದ್ದಾರೆ.
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ #ಸುಳ್ಳುರಾಮಯ್ಯ?
ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? 2/14— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022
ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್ʼಮೆಂಟ್ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ?
2008-2009; ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ..
ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ ಎಂದು ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. hdk-vs-siddaramaiah- h d kumaraswamy tweet fire on siddaramaiah









