ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HDK | ಅಜಿತ್‌ ಪವಾರ್ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೇ

Mahesh M Dhandu by Mahesh M Dhandu
May 2, 2022
in Newsbeat, State, ರಾಜ್ಯ
ex chief minister H D Kumaraswamy slams Ajit Pawar saaksha tv

ex chief minister H D Kumaraswamy slams Ajit Pawar saaksha tv

Share on FacebookShare on TwitterShare on WhatsappShare on Telegram

HDK | ಅಜಿತ್‌ ಪವಾರ್ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೇ

ಬೆಂಗಳೂರು :  ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂಬ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಹೇಳಿಕೆಯನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026
ex chief minister H D Kumaraswamy slams Ajit Pawar saaksha tv
ex chief minister H D Kumaraswamy slams Ajit Pawar saaksha tv

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ, ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂದು‌ ಪುಣೆಯಲ್ಲಿ ಅವರಿಂದು  ʼಅಪರಿಪಕ್ವʼ ಹೇಳಿಕೆ ನೀಡಿದ್ದಾರೆ.‌ ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್‌  ಮರೆಯಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೇ  ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಹಿಂದೆ; ಕರ್ನಾಟಕ & ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಾ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಖಂಡನೀಯ.‌

ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂದು‌ ಪುಣೆಯಲ್ಲಿ ಅವರಿಂದು ʼಅಪರಿಪಕ್ವʼ ಹೇಳಿಕೆ ನೀಡಿದ್ದಾರೆ.‌
ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್‌ ಮರೆಯಬಾರದು.2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2022

1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. 1950ರಲ್ಲಿ ಭಾರತ ಗಣರಾಜ್ಯವಾಗಿ ಅವತರಿಸಿತು. ಅದಾದ ಮೇಲೆ ಭಾಷಾವಾರು ಪ್ರಾಂತ್ಯಗಳು ರಾಜ್ಯಗಳಾದವು. ಸ್ವಾತಂತ್ರ್ಯದ ʼಅಮೃತ ಮಹೋತ್ಸವʼ ಈ ಕಾಲದಲ್ಲೂ ಅಜಿತ್‌ ಪವಾರ್‌ ಇನ್ನೂ ಗಡಿ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದರೆ, ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೇ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

ತಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಗಡಿ ಜನರ ಬಗ್ಗೆ ಕಳಕಳಿಯೂ ಇಲ್ಲ. ಎಂದೋ ಮುಗಿದ ವಿಷಯ ಇಟ್ಟುಕೊಂಡು ʼರಾಜಕೀಯ ಪ್ರಹಸನʼ ನಡೆಸುತ್ತಿದ್ದಾರಷ್ಟೇ. ʼಚೀನಾ ಮನಃಸ್ಥಿತಿಯ ಆಕ್ರಮಣಶೀಲʼ ಮನೋಭಾವದಿಂದ ಅಜಿತ್‌ ಪವಾರ್‌ ಹೊರಬರುವುದು ಒಳ್ಳೆಯದು.

ಸಹೋದರತ್ವ ಭಾವದಿಂದ ಬದುಕಬೇಕಾದ ಎರಡೂ ಭಾಷೆಗಳ ಜನರನ್ನು ದಿಕ್ಕು ತಪ್ಪಿಸಲು ಮತ್ತೆಮತ್ತೆ ಗಡಿ ವಿಷಯ ಕೆದಕುತ್ತಾ, ಆ ಗಡಿ ಪ್ರದೇಶಗಳು ಅಭಿವೃದ್ಧಿಯನ್ನೇ ಕಾಣದಂತೆ ನೋಡಿಕೊಳ್ಳುವ ರಾಜಕೀಯ ಹುನ್ನಾರವಷ್ಟೇ ಇದು. ಇಂಥ ಪ್ರವೃತ್ತಿ ಭಾರತದ ಐಕ್ಯತೆ & ಒಕ್ಕೂಟ ವ್ಯವಸ್ಥೆಗೇ ಗಂಡಾಂತರಕಾರಿ.

2006ರಲ್ಲಿ ಕೇಂದ್ರದ ಯುಪಿಎ ಸರಕಾರದಲ್ಲಿ ಗೃಹ ಸಚಿವರಾಗಿದ್ದ ತಮ್ಮದೇ ರಾಜ್ಯದ ನಾಯಕರನ್ನು ʼಕೀಲಿಕೈʼ ಮಾಡಿಕೊಂಡು ಇದೇ ಅಜಿತ್ ಪವಾರ್ʼರಂಥ ನಾಯಕರು ನಡೆಸಿದ ಕಿತಾಪತಿ ಕಾರಣಕ್ಕೆ, ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ನಾನು, ಅವರೆಲ್ಲರಿಗೂ ಸಡ್ಡು ಹೊಡೆದು ಬೆಳಗಾವಿಯಲ್ಲಿ ʼಸುವರ್ಣ ವಿಧಾನಸೌಧʼ ನಿರ್ಮಿಸುವ ಐತಿಹಾಸಿಕ ನಿರ್ಧಾರ ಕೈಗೊಂಡೆ.

ಸಹೋದರತ್ವ ಭಾವದಿಂದ ಬದುಕಬೇಕಾದ ಎರಡೂ ಭಾಷೆಗಳ ಜನರನ್ನು ದಿಕ್ಕು ತಪ್ಪಿಸಲು ಮತ್ತೆಮತ್ತೆ ಗಡಿ ವಿಷಯ ಕೆದಕುತ್ತಾ, ಆ ಗಡಿ ಪ್ರದೇಶಗಳು ಅಭಿವೃದ್ಧಿಯನ್ನೇ ಕಾಣದಂತೆ ನೋಡಿಕೊಳ್ಳುವ ರಾಜಕೀಯ ಹುನ್ನಾರವಷ್ಟೇ ಇದು. ಇಂಥ ಪ್ರವೃತ್ತಿ ಭಾರತದ ಐಕ್ಯತೆ & ಒಕ್ಕೂಟ ವ್ಯವಸ್ಥೆಗೇ ಗಂಡಾಂತರಕಾರಿ.5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2022

ಬೆಳಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ ʼಒಡಕು ಪ್ರವೃತ್ತಿʼಯನ್ನು ಮರಾಠಿ ನಾಯಕರು ಬಿಡಬೇಕು. ಇಲ್ಲವಾದರೆ, ದೇಶದ ಉದ್ದಗಲಕ್ಕೂ ಈಗಲೂ ಬೂದಿಮುಚ್ಚಿದ ಕೆಂಡದಂತಿರುವ ಇಂಥ ಸೂಕ್ಷ್ಮ ವಿಷಯಗಳು ಮುಂಚೂಣಿಗೆ ಬಂದು ದೇಶವೇ ಛಿದ್ರವಾಗುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಂಡು, ಕೇಂದ್ರವು ಇಂಥ ʼಆಕ್ರಮಣಶೀಲʼ ಮನಃಸ್ಥಿತಿಯುಳ್ಳವರ ಕಿವಿ ಹಿಂಡಬೇಕು

ಎಲ್ಲ ಭಾಷಿಕರು ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್ ಪವಾರ್ ಮಾತನಾಡಲಿ. ನಮ್ಮ ರಾಜ್ಯ ಸರಕಾರದ ಜತೆಯೂ ಚರ್ಚಿಸಲಿ. ಈ ನೆಲದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಿಗರೇ ಎನ್ನುವ ವಿಶಾಲ ಭಾವ ನಮ್ಮದು. ಇದನ್ನು ಪವಾರ್ ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ex chief minister H D Kumaraswamy slams Ajit Pawar

Tags: #Saaksha TVajith pawarH D KUMARASWAMYkarnataka
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram