CSK vs GT Match | ಟೈಟಾನ್ಸ್ ಗೆ ಸೂಪರ್ ಕಿಂಗ್ಸ್ ಸವಾಲು
ಇಂಡಿಯನ್ ಪ್ರಿಮಿಯರ್ ಲೀಗ್ ನ 62 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಪ್ಲೇ ಆಫ್ಸ್ ಹಾದಿಯಿಂದ ದೂರ ಸರಿದಿರುವ ಚೆನ್ನೈ ತಂಡಕ್ಕೆ ಈ ಪಂದ್ಯ ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ವೇದಿಕೆಯಾಗಿದೆ. ಆದ್ರೆ ಇತ್ತ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡಕ್ಕೆ ಈ ಪಂದ್ಯ ಹೆಚ್ಚು ಮಹತ್ವದಲ್ಲ.
ಇಂದಿನ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯಲಿದ್ದು, ಜಿದ್ದಾಜಿದ್ದ ಹೋರಾಟವನ್ನು ನಿರೀಕ್ಷೆ ಮಾಡಬಹುದಾಗಿದೆ. ಈ ಸೀಸನ್ ನಲ್ಲಿ ಈ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಮೊದಲ ಸೆಣಸಾಟದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ ಗಳಿಂದ ಜಯ ಸಾಧಿಸಿತ್ತು.
ಎಂ.ಎಸ್.ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಆವೃತ್ತಿಯಲ್ಲಿ ಈವರೆಗೂ 12 ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಗೆದ್ದು, ಎಂಟು ಅಂಕಗಳೊಂದಿಗೆ ಒಂಭತ್ತನೇ ಸ್ಥಾನದಲ್ಲಿದೆ. ಇತ್ತ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ತಂಡ 15 ನೇ ಸೀಸನ್ ನಲ್ಲಿ ಈವರೆಗು 12 ಪಂದ್ಯಗಳನ್ನಾಡಿದೆ. ಈ ಪೈಕಿ 9 ಪಂದ್ಯಗಳಲ್ಲಿ ಗೆದ್ದು 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಇದರಲ್ಲಿ ಮುಂಬೈ ತಂಡ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಧೋನಿ 36 ರನ್ ಗಳಿಸಿದ್ರು. ಮುಖೇಶ್ ಚೌಧರಿ ಮೂರು ವಿಕೆಟ್ ಪಡೆದಿದ್ದರು.
ಮತ್ತೊಂದು ಕಡೆ ಗುಜರಾತ್ ಟೈಟಾನ್ಸ್ ತಂಡ ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಖಾಮುಖಿಯಾಗಿತ್ತು. ಇದರಲ್ಲಿ ಹಾರ್ದಿಕ್ ಪಡೆ 62 ರನ್ ಗಳಿಂದ ಗೆಲುವು ಸಾಧಿಸಿದ್ದು, ಶುಭ್ ಮನ್ ಗಿಲ್ 62 ರನ್, ರಶೀದ್ 4 ವಿಕೆಟ್ ಪಡೆದು ಮಿಂಚಿದ್ದರು.
ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ತಂಡದಲ್ಲಿ ಯಾವುದೂ ಸರಿಯಿಲ್ಲ ಎಂದು ರಾಯುಡು ಟ್ವೀಟ್ ನಿಂದ ಗೊತ್ತಾಗಿದೆ. ಇದು ರಿಸಲ್ಟ್ ಮೇಲೆ ಪರಿಣಾಮ ಬೀರುತ್ತಿದೆ. ಚೆನ್ನೈ ತಂಡಕ್ಕೆ ಡಿವೋನ್ ಕಾನ್ವೇ ಒಬ್ಬರೇ ಭರವಸೆಯ ಬೆಳಕಾಗಿದ್ದಾರೆ. ಕಾನ್ವೇ ಆಟದ ಮೇಲೆ ಚೆನ್ನೈ ಗೆಲುವು ನಿಂತಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡುವ ನಿರೀಕ್ಷೆ ಇದೆ.
ಬೌಲಿಂಗ್ ವಿಭಾಗದಲ್ಲಿ ಚೆನ್ನೈ ತಂಡ ಉತ್ತಮವಾಗಿದೆ. ಸಿಮರ್ಜೀತ್ ಸಿಂಗ್, ಮಹೀಶ್ ತೀಕ್ಷಣ, ಮುಖೇಶ್ ಚೌಧರಿ ವಿಕೆಟ್ ಬೇಟೆಯಾಡುತ್ತಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಟೀಂ ಪಕ್ಕಾ ಸೆಟ್ ಆಗಿದ್ದು, ಬ್ಯಾಟಿಂಗ್ , ಬೌಲಿಂಗ್ ನಲ್ಲಿ ಆಟಗಾರರು ಅಬ್ಬರಿಸುತ್ತಿದ್ದಾರೆ. tata ipl 2022 csk vs gt match preview