IND VS ENG : ಅಖಾಡಕ್ಕಿಳಿದ ರಾಹುಲ್ ದ್ರಾವಿಡ್..
ದಕ್ಷಿಣ ಆಫ್ರಿಕಾ ವಿರುದ್ಧದ ಐದು ಟಿ 20 ಸರಣಿ ಮುಗಿಸಿಕೊಂಡು ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಜೊತೆ ಲಂಡನ್ ಫ್ಲೈಟ್ ಹತ್ತಿದ ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಲಿಸೆಸ್ಟರ್ ಶೇರ್ ನಲ್ಲಿದ್ದ ಟೀಂ ಇಂಡಿಯಾ ಆಟಗಾರರ ಜೊತೆ ಸೇರಿಸಿದ್ದಾರೆ.
ರಾಹುಲ್ ಬಂದ ಕೂಡಲೇ ಆಟಗಾರರೊಂದಿಗೆ ಮೀಟಿಂಗ್ ಮಾಡಿ ಟೆಸ್ಟ್ ಮ್ಯಾಚ್ ಗೆ ಸಿದ್ಧರಿರುವಂತೆ ಸಲಹೆ ನೀಡಿದ್ದಾರೆ.
ದ್ರಾವಿಡ್ ಟೀಂ ಇಂಡಿಯಾದ ಆಟಗಾರರೊಂದಿಗೆ ಕೂಡಿ ಪ್ರಾಕ್ಟೀಸ್ ಆರಂಭಿಸಿದ ಫೋಟೋಗಳನ್ನು ಬಿಸಿಸಿಐ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದೆ.
ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ನಡೆಯಲಿದೆ. ಕೊರೊನಾ ಕಾರಣದಿಂದ ಕಳೆದ ವರ್ಷ ನಡೆಯಬೇಕಿದ್ದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ರದ್ದುಗೊಳಿಸಲಾಗಿತ್ತು.

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ, ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್, ಬೌಲಿಂಗ್ ಕೋಚ್ ಭರತ್ ಅರುಣ್, ಫಿಸಿಯೋ ನಿತಿನ್ ಪಟೇಲ್ ಮತ್ತು ಸಹಾಯಕ ಫಿಸಿಯೋ ಯೋಗೇಶ್ ಪರ್ಮಾರ್ ಅವರಿಗೆ ಕರೋನಾ ತಗುಲಿತ್ತು. ಇದರ ನಂತರ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಯಿತು.
4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-1 ಮುನ್ನಡೆ ಸಾಧಿಸಿದೆ. ಆಗ ತಂಡದ ನಾಯಕ ವಿರಾಟ್ ಕೊಹ್ಲಿ ಇದ್ದರು.
ಅದೇ ಸಮಯದಲ್ಲಿ, ರವಿಶಾಸ್ತ್ರಿ ತಂಡದಲ್ಲಿ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದರು. ಇದೀಗ ತಂಡದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿದ್ದು, ತಂಡದ ಕೋಚ್ ರಾಹುಲ್ ದ್ರಾವಿಡ್.
ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಏಕೈಕ ಟೆಸ್ಟ್ ಪಂದ್ಯವನ್ನಾಡಬೇಕಿದೆ.








