Karnataka BJP | ಸಿದ್ದರಾಮಯ್ಯ ಅವರದ್ದು ಅದೇ ರಾಗ, ಅದೇ ಹಾಡು
ಬೆಂಗಳೂರು : ಪ್ರತಿ ಬಾರಿ ಚುನಾವಣೆ ಬಂದಾಗಲೂ ಸಿದ್ದರಾಮಯ್ಯ ಅವರದ್ದು ಅದೇ ರಾಗ, ಅದೇ ಹಾಡು. ಇದೇ ನನ್ನ ಕೊನೆಯ ಚುನಾವಣೆ ಎನ್ನುವುದು ಅಭ್ಯಾಸವಾಗಿ ಬಿಟ್ಟಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
2023ರ ವಿಧಾನಸಭಾ ಚುನಾವಣೆ ನನ್ನ ಕೊನೇ ಚುನಾವಣೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ… ಪ್ರತಿ ಬಾರಿ ಚುನಾವಣೆ ಬಂದಾಗಲೂ ಸಿದ್ದರಾಮಯ್ಯ ಅವರದ್ದು ಅದೇ ರಾಗ, ಅದೇ ಹಾಡು. ಇದೇ ನನ್ನ ಕೊನೆಯ ಚುನಾವಣೆ ಎನ್ನುವುದು ಅಭ್ಯಾಸವಾಗಿ ಬಿಟ್ಟಿದೆ.ಹೀಗೇ ಹೇಳುತ್ತಿರಿ, ಜನರೇ ನಿಮ್ಮ ರಾಜಕೀಯಕ್ಕೆ ಅಂತ್ಯ ಹಾಡುತ್ತಾರೆ. ಬಾದಾಮಿಯಲ್ಲಿ ಕೂದಲೆಳೆಯ ಅಂತರದಲ್ಲಿ ಜೀವದಾನ ಪಡೆದಿರಿ. ಮುಂದೆ ನಿಮ್ಮವರೂ ನಿಮ್ಮನ್ನು ಕಾಪಾಡಲಾರರು!

ಸಿದ್ದರಾಮಯ್ಯನವರೇ ಈ ಬಾರಿ ನೀವು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಹೀಗಾಗಿ ಇದೇ ನಿಮ್ಮ ಕೊನೆಯ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ. ಅಂದ ಹಾಗೆ ನಿಮ್ಮ ಸೋಲಿಗೆ ಯೋಗದಾನ ನೀಡುವವರು ನಿಮ್ಮ ಪಕ್ಷದಲ್ಲೇ ಇದ್ದಾರೆ ಎಂಬುದನ್ನು ಮರೆಯಬೇಡಿ ಎಂದು ಕಿಡಿಕಾರಿದೆ.








