Kallakurichi | ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಖಾಸಗಿ ಶಾಲೆಗಳಿಗೆ ರಜೆ
ತಮಿಳುನಾಡು : ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಪ್ರಕರಣದ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ಸಂಘದ ಅಧ್ಯಕ್ಷೆ ಆರ್.ವಿಶಾಲಾಕ್ಷಿ ಮಾತನಾಡಿದ್ದು, ಮೃತಳ ಕುಟಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಆದ್ರೆ ಹಿಂಸಾತ್ಮಕ ಪ್ರತಿಭಟನೆಯನ್ನು ಬಲವಾಗಿ ಖಂಡಿಸಿದ್ದಾರೆ.
ಅಲ್ಲದೆ ಹಿಂಸಾತ್ಮಕ ಪ್ರತಿಭಟನೆ ವಿರೋಧಿಸಿ ಇಂದು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ಕಾರಣಕ್ಕೆ ಕಲ್ಲಕುರಿಚಿ kallakurichi ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.
ಖಾಸಗಿ ಶಾಲೆಯಲ್ಲಿ ಶಿಕ್ಷಕರ ಕಿರುಕುಳ ತಾಳಲಾರದೆ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ವರದಿ ನೀಡುವಂತೆ ಮುಖ್ಯ ಶಿಕ್ಷಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.