ABVP protest | ಮುಸ್ಲಿಂ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ಎಬಿವಿಪಿ ಪ್ರೊಟೆಸ್ಟ್
ವಿಜಯಪುರ : PFI, SDPI ಸೇರಿದಂತೆ ಇತರೆ ಮುಸ್ಲಿಂ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ವಿಜಯಪು ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ಪಟ್ಟಣದ ಬಸವೇಶ್ವರ ಕಾಲೇಜಿನಿಂದ ಮಿನಿ ವಿಧಾನಸೌಧದ ವರೆಗೆ ಎಬಿವಿಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು.
ಪ್ರತಿಭಟನೆ ವೇಳೆ ಗೃಹ ಸಚಿವರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಯಿತು. ರಾಜ್ಯದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಕೊಲೆಯಾಗುತ್ತಿದೆ.

ಶಿವಮೊಗ್ಗದ ಹರ್ಷ ಕೊಲೆ ಮಾಸುವ ಮುನ್ನವೇ ಪ್ರವೀಣ್ ನೆಟ್ಟಾರು ಎಂಬ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ. ಹೀಗಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಇತ್ತ ಕುಂದಾಪುರ ಬೆಳಗಾವಿ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಧರಣಿ ನಡೆಸಿದರು.
ಆರ್ ಎನ್ ಶೆಟ್ಟಿ ಕಾಲೇಜಿನಿಂದ ಮೆರವಣಿಗೆಯಲ್ಲಿ ಆಗಮಿಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಿಸಿದರು.








