Belgaum | ಲಾರಿ ಹರಿದು 16 ವರ್ಷದ ವಿದ್ಯಾರ್ಥಿನಿ ಸಾವು
ಬೆಳಗಾವಿ : ಕಾಲೇಜು ವಿದ್ಯಾರ್ಥಿನಿ ಮೇಲೆ ಮರಳು ತುಂಬಿದ ಲಾರಿ ಹರಿದು 16ವರ್ಷ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
16 ವರ್ಷದ ಸಾಬೀಯಾ ಶಬ್ಬೀರ್ ಅಹಮದ್ ಪಾಳೇಗಾರ ಮೃತ ವಿದ್ಯಾರ್ಥಿನಿಯಾಗಿದ್ದಾರೆ.
ಪೋರ್ಟ್ ರಸ್ತೆ ಮೂಲಕ ಭರತೇಶ ಕಾಲೇಜಿಗೆ ಹೋಗುವಾಗ ವಿದ್ಯಾರ್ಥಿನಿ ಮೇಲೆ ಲಾರಿ ಹರಿದಿದೆ.

ಇದರಿಂದ ಸ್ಥಳದಲ್ಲಿಯೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಮತ್ತು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ
ಲಾರಿ ಚಾಲಕ ಮೆಹಬೂಬ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








