ಇಳಿಕೆಯಾದ ಪೆಟ್ರೋಲ್, ಡೀಸೆಲ್ ದರ
ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿ
ಜಾಗತಿಕ ಕಚ್ಚಾ ತೈಲ ತೀವ್ರ ಇಳಿಕೆ
13 ಜಿಲ್ಲೆಗಳಲ್ಲಿ ಬಿಟ್ಟು ಇನ್ನುಳಿದ ಕಡೆ ದರ ಇಳಿಕೆ
ದೇಶದಲ್ಲಿ ಇಂಧನ ಬೆಲೆ ನೂರು ರುಪಾಯಿ ತಲುಪಿ ಗ್ರಾಹಕರ ಜೇಬಿಗೆ ಕತ್ತರಿಯಾಗುತ್ತಿದೆ.
ಭಾರತದಲ್ಲಿ ಕಳೆದ 75 ದಿನಗಳಿಂದ ಇಂಧನ ದರಯಲ್ಲಿ ಯಾವುದೇ ಬದಲಾವಣೆ ಇಲ್ಲದೇ ಸ್ಥಿರತೆ ಕಾಯ್ದುಕೊಂಡಿದೆ.
ಈ ನಡುವೆ ಜಾಗತಿಕ ಕಚ್ಚಾ ತೈಲ ಇಂದು ತೀವ್ರ ಇಳಿಕೆಯಾಗಿದ್ದು, 95 ಡಾಲರ್ ಗಡಿಯಿಂದ ಕೆಳಗಿಳಿದಿದೆ.
ಪರಿಣಾಮ ಕರ್ನಾಟಕದ 13 ಜಿಲ್ಲೆಗಳನ್ನು ಹೊರತು ಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆಯಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ ಹೀಗೆ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಿದೆ.