Ganja | ತುಮಕೂರಿನಲ್ಲಿ ಗಾಂಜಾ ಬೆಳೆಯುತ್ತಿದ್ದವನ ಬಂಧನ
ತುಮಕೂರು : ಹೂ ಕುಂಡಗಳಲ್ಲಿ ಗಾಂಜಾ ಬೆಳೆಯುತ್ತಿದ್ದ ಖತರ್ನಾಕ್ ಆಸಾಮಿಯನ್ನು ಗುಬ್ಬಿ ಠಾಣಾ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಗಫರ್ ಅಲಿಖಾನ್ ಬಂಧಿತ ಆರೋಪಿಯಾಗಿದ್ದಾರೆ.
ಗಫರ್ ಅಲಿಖಾನ್ ಗುಬ್ಬಿಪಟ್ಟಣದ ಜ್ಯೋತಿನಗರದ ನಿವಾಸಿಯಾಗಿದ್ದು, ಮನೆಯ ಹೂ ಕುಂಡಗಳಲ್ಲಿ ಗಾಂಜಾ ಬೆಳೆಯುತ್ತಿದ್ದ.
ಇದರ ಮಾಹಿತಿ ಪಡೆದ ಪೊಲೀಸರು, ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಹೊರಜಗತ್ತಿಗೆ ಆಟೋ ಚಾಲಕನಾಗಿ ಗುರುತಿಸಿಕೊಂಡಿದ್ದ ಗಫರ್ ಅಲಿಖಾನ್, ತನ್ನ ಮನೆಯ ಎರಡು ಹೂವಿನ ಕುಂಡಗಳಲ್ಲಿ ಗಾಂಜಾ ಸೊಪ್ಪು ಬೆಳೆದಿದ್ದ.
ಇದರ ಖಚಿತ ಮಾಹಿತಿ ಮೇರೆಗೆ ಗುಬ್ಬಿ ಮತ್ತು ಚೇಳೂರು ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಈತನ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.








