Bangalore : ರಾಜ್ಯಕ್ಕೆ ಎಸ್. ನಿಜಲಿಂಗಪ್ಪನವರ ಕೊಡುಗೆ ಅಪಾರ : ವಿ.ಸೋಮಣ್ಣ
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ವಿ.ಸೋಮಣ್ಣ ಅವರು ಮಾಲಾರ್ಪಣೆ ಸಲ್ಲಿಸಿದರು.
ಇದೆ ವೇಳೆ ಮಾತನಾಡಿದ ಸಚಿವರು, ನಿಜಲಿಂಗಪ್ಪನವರ 22ನೇ ಪುಣ್ಯತಿಥಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ಅನುಪಸ್ಥಿತಿಯಲ್ಲಿ ಸರ್ಕಾರದ ವತಿಯಿಂದ ಮಾಡಿದ್ದೇವೆ. ಕರ್ನಾಟಕದಲ್ಲಿ ನೂರಾರು ಯೋಜನೆಗಳಿಗೆ ನಿಜಲಿಂಗಪ್ಪನವರು ಚಾಲನೆಯನ್ನು ನೀಡಿದ್ದರು.

ಪ್ರಧಾನಿಯಾಗುವ ಅವಕಾಶ ಇದ್ದಾಗಲೂ ಅದನ್ನು ತೊರೆದು ಜನಸೇವೆ ಮಾಡಿದವರು. ಕರ್ನಾಟಕ ಮತ್ತು ಬೆಂಗಳೂರಿಗೆ ನಿಜಲಿಂಗಪ್ಪನವರ ಕೊಡುಗೆ ಅಪಾರ, ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ತಿಳಿಸಿದರು
ಮಳೆ ಹಾನಿ ವಿಚಾರವಾಗಿ ಮಾತನಾಡಿದ ಸಚಿವರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸಾಕಷ್ಟು ಕೆಲಸ ಮಾಡ್ತಿದ್ದಾರೆ. ರಾಜ್ಯ ಸರ್ಕಾರದಿಂದ 800 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದ್ದೇವೆ.
ಕೋವಿಡ್ನ ನೋವಿನಲ್ಲೂ ಸಿಎಂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಪ್ರಕೃತಿಯಿಂದ ಆಗಿರುವ ನೋವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸುತ್ತದೆ ಎಂದು ಭರವಸೆ ನೀಡಿದರು.








