National Anthem | ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ
ಬೆಂಗಳೂರು : ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಸಬೇಕು.
ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರುಗಳು ಬಂದಿದ್ದವು.
ಇದನ್ನ ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಸಿಚಿವ ಬಿ.ಸಿ.ನಾಗೇಶ್, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಈ ಹಿನ್ನೆಎಲಯಲ್ಲಿ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸಬೇಕುಎ ಎಂದು ಇಲಾಖೆ ಸುತ್ತೊಲೆ ಹೊರಡಿಸಿದೆ.








