Savarkar | ತುಮಕೂರಲ್ಲಿ ಸಾವರ್ಕರ್ ಫ್ಲೆಕ್ಸ್ ಜಟಾಪಟಿ
ತುಮಕೂರು : ತುಮಕೂರಲ್ಲಿ ಸಾವರ್ಕರ್ ಫ್ಲೆಕ್ಸ್ ಜಟಾಪಟಿ ಮುಂದುವರಿದೆ.
ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಎದುರು ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸಿದ್ದಾರೆ.

ತುಮಕೂರಿನಲ್ಲಿ ಮೊನ್ನೆ ರಾತ್ರಿ ಸಾವರ್ಕರ್ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಹರಿದು ಹಾಕಿದ್ದರು.
ಹೀಗಾಗಿ ಮತ್ತೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಎದುರು ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.
ಸ್ಥಳದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.








