Chitradurga | ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧ ದೂರು
ಚಿತ್ರದುರ್ಗ : ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಸ್.ಕೆ.ಬಸವರಾಜನ್ ಅವರ ವಿರುದ್ದ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಅಲ್ಲದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿರುದ್ದವೂ ಕೂಡಾ ಬ್ಲಾಕ್ ಮೇಲ್ ಕೇಸ್ ದಾಖಲಿಸಲಾಗಿದೆ.
ಮುರುಘಾ ಮಠದ ಹಾಸ್ಟೇಲ್ ಮಹಿಳಾ ವಾರ್ಡನ್ ಒಬ್ಬರು ಎಸ್.ಕೆ.ಬಸವರಾಜನ್ ವಿರುದ್ದ ಕಲಂ 354 ಅಡಿ ಲೈಂಗಿಕ ದೌರ್ಜನ್ಯ ಯತ್ನ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಇನ್ನೂ ಕಲಂ 341, 342,504,506 ಅಡಿ ಕೇಸ್ ದಾಖಲಾಗಿದ್ದು, ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








