BHARAT JODO YATRA | ಭಾರತ್ ಜೋಡೋ ಯಾತ್ರೆಗೆ ಸಿದ್ಧತೆ!
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ
ಕೆಪಿಸಿಸಿ ಕಚೇರಿಯಲ್ಲಿ ಲೋಗೋ ರಿಲೀಸ್
ರಾಷ್ಟ್ರದ ಐಕ್ಯತೆಗಾಗಿ ಭಾರತ್ ಜೋಡೋ
3500 ಕಿಲೋ ಮೀಟರ್ ನಷ್ಟು ಪಾದಯಾತ್ರೆ
ಬೆಂಗಳೂರು : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುವ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಕರ್ನಾಟಕದಲ್ಲಿ ಈ ಯಾತ್ರೆ 21 ದಿನಗಳ ನಡೆಯಲಿದೆ. ಇದರ ನಾಯಕತ್ವವನ್ನು ರಾಹುಲ್ ಗಾಂಧಿ ವಹಿಸುತ್ತಿದ್ದು, ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಲೋಗೋ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಎಂ ಬಿ ಪಾಟೀಲ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಕಾಂಗ್ರೆಸ್ ನಾಯಕರು ಭಾರತ ಐಕ್ಯತಾ ಯಾತ್ರೆಯ ಲೋಗೋ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪ್ರತಿನಿತ್ಯ 25 ಕಿಲೋ ಮೀಟರ್ ನಂತೆ ಕರ್ನಾಟಕದಲ್ಲಿ 21 ದಿನಗಳ ಕಾಲ ಭಾರತ್ ಜೋಡೋ ಪಾದಯಾತ್ರೆ ನಡೆಯಲಿದೆ.
ಈ ಪಾದಯಾತ್ರೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರು ಭಾಗವಹಿಸಬಹುದು. ಯಾತ್ರೆಯ ಯಶಸ್ಸಿಗೆ ಸಕಲ ಸಿದ್ದತೆ ಪೂರ್ಣಗೊಂಡಿದೆ ಎಂದು ಹೇಳಿದರು.
ದೇಶದಲ್ಲಿ ಒಟ್ಟು ಸುಮಾರು 3,500 ಕಿಲೋ ಮೀಟರ್ ನಷ್ಟು ಪಾದಯಾತ್ರೆ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 511 ಕಿಲೋ ಮೀಟರ್ ದೂರ ಯಾತ್ರೆ ಸಾಗಲಿದೆ.
ರಾಹುಲ್ ಗಾಂಧಿ ಜೊತೆ 125 ಪಾದಯಾತ್ರಿಗಳು ಇರುತ್ತಾರೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಲ್ಲಿ ಈ ಯಾತ್ರೆ ಆರಂಭವಾಗಲಿದೆ. ಗುಂಡ್ಲುಪೇಟೆ ಮಾರ್ಗವಾಗಿ ಕರ್ನಾಟಕಕ್ಕೆ ಯಾತ್ರೆ ಪ್ರವೇಶಿಸಲಿದೆ.







