Congress ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ : ಬಿಜೆಪಿ ವ್ಯಂಗ್ಯ
ನವದೆಹಲಿ : ಕಳೆದ ಲೋಕಸಭಾ ಚುನಾವಣೆ ನಂತರ ಪೂರ್ಣಾವಧಿ ಅಧ್ಯಕ್ಷರಿಲ್ಲದೇ ಸಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ಅಕ್ಟೋಬರ್ 17 ರಂದು ಚುನಾವಣೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನ ತೆಗೆದುಕೊಂಡಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಘಟಕ, ದಿಕ್ಕೆಟ್ಟು ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ನಾವಿಕನ ನೇಮಕಕ್ಕೆ ಮತ್ತೆ ಮುಹೂರ್ತ ನಿಗದಿಯಾಗಿದೆ.
ನಕಲಿ ಗಾಂಧಿ ಕುಟುಂಬದೊಳಗೆ ನಡೆಯುವ ಈ ಚುನಾವಣೆಗೆ ಉಳಿದವರು ಮೂಕ ಪ್ರೇಕ್ಷಕರಷ್ಟೇ!

ಸೋನಿಯಾ ಗಾಂಧಿ – ರಾಹುಲ್ ಗಾಂಧಿ ಅವರ ನಡುವಿನ ಅಧಿಕಾರ ಹಸ್ತಾಂತರದ ಪ್ರಕ್ರಿಯೆಗೆ ಚುನಾವಣೆಯೆಂಬ ನಾಟಕದ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲುಂಡ ಕಾರಣ, ಅಂದಿನ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದಾದ ಬಳಿಕ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರೇ ಮುಂದುವರೆಯುತ್ತಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಗೂ ಮುನ್ನ ಅಧ್ಯಕ್ಷರನ್ನ ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.








