Siddaramaiah | ಬಿ.ಎಸ್.ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು
ಬೆಂಗಳೂರು : ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿ.ಎಸ್.ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ…
2018ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
https://twitter.com/siddaramaiah/status/1564197113898369024?s=20&t=e5FKaFtVfq7_k0XKmS3fMQ
ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳಲ್ಲಿ 10% ಕೂಡ ಈಡೇರಿಸಿಲ್ಲ.ಉಳಿದ ಭರವಸೆಗಳ ಈಡೇರಿಕೆ ಯಾವಾಗ?
ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದು ಬಿಜೆಪಿ ಅವರು ವಚನ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಕೇವಲ 48 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಒಂದು ಲಕ್ಷ ಕೋಟಿ ರೂಪಾಯಿಯ ಯೋಜನೆಗಳು ಜಾರಿಯಾಗೋದು ಯಾವಾಗ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ಬಿಜೆಪಿ ಅವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿ.ಎಸ್.ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ಕುಟುಕಿದ್ದಾರೆ.








