Ganeshotsava | ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಲ್ಲಿ ಜನಸಾಗರ
ಬೆಂಗಳೂರು : ರಾಜ್ಯದೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ.
ಕೊರೊನಾ ಕಾಟದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿತ್ತು.
ಆದ್ರೆ ಈ ಬಾರಿ ಗಣೇಶೋತ್ಸವಕ್ಕೆ ಯಾವುದೇ ವಿಘ್ನಗಳು ಇಲ್ಲದಿರುವುದರಿಂದ ಎಲ್ಲರಲ್ಲೂ ಹಬ್ಬದ ಸಂಭ್ರಮ ಡಬಲ್ ಆಗಿದೆ.
ಈ ನಡುವೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ. ಹಬ್ಬಕ್ಕಾಗಿ ಹೂವು ಹಣ್ಣು ತರಕಾರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.

ಸರ್ಕಾರ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಬಾರಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜನ ಮುಗಿಬಿದ್ದಿದ್ದಾರೆ.
ಹೀಗಾಗಿ ನಗರದ ಕೆ.ಆರ್ ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ.
ಮಾತ್ರವಲ್ಲ ನಗರದಲ್ಲಿರುವ ಎಲ್ಲಾ ಮಾರುಕಟ್ಟೆಗಳಲ್ಲೂ ಜನ ಜಂಗುಳಿ ಕಂಡು ಬರುತ್ತಿದೆ.
ಹೂವು, ಹಣ್ಣು ಸೇರಿದಂತೆ ಹಬ್ಬದ ಸಾಮಾಗ್ರಿಗಳ ಖರೀದಿ ಬಲು ಜೋರಾಗಿದೆ.
ಆದ್ರೆ ಗಣೇಶೋತ್ಸವಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಮೂರು ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ.








