Vijayapura | ಭೀಕರ ಅಪಘಾತ: ಬಸ್‍ಗೆ 2 ಕಾರು ಡಿಕ್ಕಿ
ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ
ಕೊಲ್ಹಾರ ತಾಲೂಕಿನ ಕುಪಕಡ್ಡಿ ಬಳಿ ಘಟನೆ
ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವು
ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ವಿಜಯಪುರ : ಕೆಎಸ್ ಆರ್ ಟಿಸಿ ಬಸ್ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಪಕಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಲಬುರಗಿ ಜಿಲ್ಲೆಯ ಮೂಲದಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ, ಸುನಂದಾ ಅವರ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ ಎಂದು ಗುರುತಿಸಲಾಗಿದೆ.

ಇನ್ನು ಘಟನೆಯಲ್ಲಿ ಸುಹಾನ್ ಕಲಶೆಟ್ಟಿ, ಸಾನ್ವಿ ಕಲಶೆಟ್ಟಿ, ಉಮೇಶ ಕಲಶೆಟ್ಟಿ ಹಾಗೂ ಸುರೇಖಾ ಕಲಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳಿಗೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸದ್ಯ ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








