Bantwala | ಹೆಜ್ಜೇನು ದಾಳಿಗೆ ಬಾಲಕ ಸಾವು
ಬಂಟ್ವಾಳ : ಹೆಜ್ಜೇನು ದಾಳಿಯಿಂದ ಬಾಲಕ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕಳಾಯಿಯಲ್ಲಿ ನಡೆದಿದೆ.
ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬುವರ ಪುತ್ರ ಮಾಝಿನ್ (12) ಮೃತ ಬಾಲಕ ಎಂಬುದಾಗಿ ತಿಳಿದು ಬಂದಿದೆ.

ಮನೆಯ ಬಳಿ ಆಟವಾಡುತ್ತಿದ್ದ ವೇಳೆಯಲ್ಲಿ ಮಾಝಿನ್ ಮೇಲೆ ಹೆಜ್ಜೇನು ದಾಳಿ ನಡೆಸಿತ್ತು.
ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇತ್ತ ಬಾಲಕನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.








