ಯುವಕನಿಗೆ ಥಳಿಸಿದ ಬಿಜೆಪಿ ಪುರಸಭಾ ಸದಸ್ಯ
ತುಮಕೂರು : ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಬಿಜೆಪಿ ಪುರಸಭಾ ಸದಸ್ಯ ಹಾಗೂ ಆತನ ಪತ್ನಿ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ.

ಗುಬ್ಬಿ ಪಟ್ಟಣದಲ್ಲಿ ಯುವಕರು ಗಣಪತಿ ವಿಸರ್ಜನೆ ಮಾಡಿ, ವಾಪಸ್ಸಾಗುತ್ತಿದ್ದ ವೇಳೆ ಕಾರ್ಪೋರೇಟರ್ ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಯುವಕನೊಬ್ಬನಿಗೆ ಥಳಿಸಿದ್ದಾರೆ. ಆದ್ರೆ ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಯುವಕನಿಗೆ ಕಾರ್ಪೋರೇಟರ್ ಥಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.








