BJP | ಡಿಕೆಶಿ – ಸಿದ್ದರಾಮಯ್ಯ ಬಣ ಜೋಡಿಸಲು ಕಾಂಗ್ರೆಸ್ ಮತ್ತೊಂದು ಯಾತ್ರೆ
ಬೆಂಗಳೂರು : ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನದ ಬೇಗುದಿ ಹೆಚ್ಚಾಗುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ, ಭಾರತ್ ಜೋಡೋ ಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಆಹ್ವಾನವಿಲ್ಲ. ಸಿದ್ದರಾಮೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಸ್ಥಾನವಿರಲಿಲ್ಲ, ಅದರ ಕೋಪವನ್ನು ಭಾರತ್ ಜೋಡೋ ಯಾತ್ರೆಯ ಮೂಲಕ ಡಿ.ಕೆ.ಶಿವಕುಮಾರ್ ತೀರಿಸಿಕೊಳ್ಳುತ್ತಿದ್ದಾರೆಯೇ?
ಹಿರಿಯ ಕಾಂಗ್ರೆಸ್ ನಾಯಕ ದೇಶಪಾಂಡೆ ಅವರು ರಾಹುಲ್ ಗಾಂಧಿ ಯಾತ್ರೆಗೆ ಜನ ಸೇರಿಸಲು ನಿರಾಕರಿಸಿದ ಕಾರಣ ಯಾವೊಂದು ಸಮಿತಿಯಲ್ಲೂ ಡಿ.ಕೆ.ಶಿವಕುಮಾರ್ ಸ್ಥಾನ ನೀಡಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಣದ ನಾಯಕರನ್ನು ಕಡೆಗಣಿಸುವ ಡಿಕೆಶಿ ಕಡೆಗಣಿಸುತ್ತಿದ್ದಾರೆಯೇ?
ಭಾರತ್ ಜೋಡೋ ಯಾತ್ರೆಯ ಸಿದ್ಧತೆಯ ನಡುವೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಆಂತರಿಕ ಕಲಹ ಮುಗಿಲು ಮುಟ್ಟಿದೆ. ಭಾರತ್ ಜೋಡೋ ಯಾತ್ರೆಯ ಬಳಿಕ ಡಿಕೆಶಿ ಮತ್ತು ಸಿದ್ದರಾಮಯ್ಯ ಬಣ ಜೋಡಿಸಲು ಕಾಂಗ್ರೆಸ್ ಮತ್ತೊಂದು ಯಾತ್ರೆ ಆಯೋಜಿಸಲಿದೆಯೇ ಎಂದು ವ್ಯಂಗ್ಯವಾಡಿದೆ.
ಪರಿಶಿಷ್ಟ ಜಾತಿ & ಪಂಗಡಗಳ ಸಮುದಾಯಗಳಿಗೆ ಜಾರಿಯಾದ ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಹಿಂಪಡೆಯಲಾಗಿಲ್ಲ, ಹೊಸ ನಿಯಮಗಳೊಂದಿಗೆ ಮರುಜಾರಿಯಾಗಲಿದೆ. ಕಾಂಗ್ರೆಸ್ ಗೆ ಪರಿಶಿಷ್ಟರ ಬಗ್ಗೆ ಕಿಂಚಿತ್ ಕಾಳಜಿಯೂ ಇಲ್ಲ ಎನ್ನುವುದು ಒಂದು ಸತ್ಯವಾದರೆ, ಸುಳ್ಳು ಸುದ್ದಿ ಹಬ್ಬಿಸಿ ಅವರ ಏಳಿಗೆಗೆ ತಡೆಯೊಡ್ಡುವುದು ಹೊಸ ತಂತ್ರ ಎಂದು ಡಿಕೆಶಿಗೆ ಬಿಜೆಪಿ ಟಾಂಗ್ ನೀಡಿದೆ.