Tumkur | ಕ್ಯಾಂಟರ್ ಹಾಗೂ ಬೈಕ್ ನಡುವೆ ಅಪಘಾತ
ತುಮಕೂರು : ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತಣ್ಣೇನಹಳ್ಳಿ ನಡೆದಿದೆ.
42 ವರ್ಷದ ರಾಜಣ್ಣ ಮೃತ ದುರ್ದೈವಿಯಾಗಿದ್ದು, ಇವರು ವೆಂಕಟಾಪುರ ನಿವಾಸಿ ಎಂದು ಗುರುತಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿ ಮಾಡಿದ್ದಾರೆ.
ಇನ್ನು ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.