AAP – ಆಮ್ ಆದ್ಮಿ ಪಾರ್ಟಿ ಸೇರಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರು
ಬೆಂಗಳೂರು : ಬೆಂಗಳೂರಿನ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಇಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರುಗಳು ಪಕ್ಷಕ್ಕೆ ಸೇರ್ಪಡೆಯಾದರು.
ರಾಜ್ಯದ ಕೇಂದ್ರ ಚುನಾವಣಾ ಉಸ್ತುವಾರಿಗಳು ಹಾಗೂ ದೆಹಲಿಯ ಶಾಸಕರು ಮುಖ್ಯ ಸಚೇತಕರೂ ಆದ ದಿಲೀಪ್ ಪಾಂಡೆ ರವರ ಸಮ್ಮುಖದಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಹಾಲುಮತ ಸಮಾಜ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಖ್ಯಾತ ವಕೀಲರಾದ ಹೊಳಿಯಪ್ಪ ಬಿ.ಕುರಿ,

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಪುರಸಭಾ ಸದಸ್ಯರು ಹಾಗೂ ಯುವ ಮುಖಂಡರಾದ ರಜಾಕ್ ಸುಳ್ಯ , ಕುಷ್ಟಗಿ ಪುರಸಭೆಯ ಮಾಜಿ ಸದಸ್ಯರು ಹಾಗೂ ಬಿಜೆಪಿ ಯುವ ಮುಖಂಡ ಚನ್ನಪ್ಪ ನಾಲಗಾರ ಹಾಗೂ ಕುಷ್ಟಗಿ ಹಾಲುಮತ ಮಹಾಸಭಾದ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಮುಖಂಡ ಹಾಗೂ ವಕೀಲ ಹುಲಗಪ್ಪ ಡಿ.ಚೂರಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷ ವಿಜಯ್ ಶರ್ಮಾ ಹಾಗೂ ಯುವ ಘಟಕದ ಅಧ್ಯಕ್ಷ ಮುಕುಂದ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.








