Belgaum | ಶಾಸಕರನ್ನು ಪ್ರಶ್ನಿಸಿದ್ದಕ್ಕೆ ಯುವಕನ ಬಂಧನ
ಬೆಳಗಾವಿ : ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಳಪೆ ಕಾಮಗಾರಿ ಬಗ್ಗೆ ಶಾಸಕ ಪಿ ರಾಜೀವ ಅವರನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬಂಧಿಸಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಶಾಸಕ ಪಿ ರಾಜೀವ ಅವರಿಗೆ ಸಾರ್ವಜನಿಕರು ಸರಣಿ ಪ್ರಶ್ನೆಗಳನ್ನು ಕೇಳಿದರು.
ಅದರಲ್ಲೂ ಯುವಕರು ರಸ್ತೆ ಗುಣಮಟ್ಟ ಪ್ರಶ್ನಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಶಾಸಕರು ಮತ್ತು ಯುವಕರೊಂದಿಗೆ ಮಾತಿನ ಚಕಮಕಿ ನಡೆಯಿತು.
ಈ ಹಂತದಲ್ಲಿ ಇವರನ್ನ ಅರೆಸ್ಟ್ ಮಾಡಿ ಎಂದು ಶಾಸಕರು ಪೊಲೀಸರಿಗೆ ಸೂಚಿಸಿದ್ದು, ಅವರ ಮಾತನ್ನು ಪೊಲೀಸರು ಪಾಲಿಸಿದ್ದಾರೆ.








