ind-vs-rsa-1st-t20i | ಇಂಡೋ – ಆಫ್ರಿಕಾ ಸರಣಿ | ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಇಂಡೋ – ಆಫ್ರಿಕಾ ಟಿ 20 ಸರಣಿಯ ಭಾಗವಾಗಿ ಇಂದು ಮೊದಲ ಟಿ 20 ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.
ಕಳೆದ ಆಸ್ಟ್ರೆಲಿಯಾ ಸರಣಿಯಲ್ಲಿ ಆಡಿದ್ದ ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಗೆ ಈ ಸರಣಿಯಲ್ಲಿ ರೆಸ್ಟ್ ನೀಡಲಾಗಿದ್ದು, ಅವರ ಬದಲಿಗೆ ರಿಷಬ್ ಪಂತ್ ಮತ್ತು ಅರ್ಷ್ ದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಜಸ್ ಪ್ರಿತ್ ಬುಮ್ರಾ ಮತ್ತು ಚಹಾಲ್ ಅವರನ್ನ ತಂಡದಿಂದ ಡ್ರಾಪ್ ಮಾಡಲಾಗಿದ್ದು, ದೀಪಕ್ ಚಹಾರ್ ಮತ್ತು ಅಶ್ವಿನ್ ತಂಡದಲ್ಲಿ ಸ್ಥಾನಪಡೆದಿದ್ದಾರೆ.

ಭಾರತ ತಂಡ ಹೀಗಿದೆ
ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಷ್ ದೀಪ್ ಸಿಂಗ್
ದಕ್ಷಿಣ ಆಫ್ರಿಕಾ ತಂಡ
ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ, ರಿಲೀ ರೋಸ್ಸೌ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ









