India-vs-South-africa | ಅರ್ಷ್ ದೀಪ್, ಚಹಾರ್ ಬೆಂಕಿ ದಾಳಿ : ಭಾರತಕ್ಕೆ ಜಯ
ತಿರುವನಂತಪುರಂ : ಅರ್ಷ್ ದೀಪ್ ಸಿಂಗ್, ದೀಪಕ್ ಚಹಾರ್ ಅವರ ಮಾರಕ ದಾಳಿ ಹಾಗೂ ಉಪನಾಯಕ ಕೆ.ಎಲ್.ರಾಹುಲ್, ಸೂರ್ಯ ಕುಮಾರ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ.
ತಿರುವನಂತಪುರಂನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೊದಲ ಟಿ 20 ಪಂದ್ಯ ನಡೆಯಿತು. ಈ ಪಂದ್ಯದ ಆರಂಭದಿಂದಲೂ ಟೀಂ ಇಂಡಿಯಾ ಮೇಲು ಗೈ ಸಾಧಿಸುತ್ತಾ ಗೆಲುವು ಸಾಧಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳ ನಷ್ಟಕ್ಕೆ 108 ರನ್ ಗಳಿಸಿತು.
ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿಮುಟ್ಟಿತು.
ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭದಲ್ಲಿ ಆಘಾತ ಅನುಭವಿಸಿತು.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಲಾ ಎರಡು ಎಸೆತಗಳನ್ನು ಎದುರಿಸಿ ಪೆವಿಲಿಯನ್ ಸೇರಿಕೊಂಡರು.
ಈ ಹಂತದಲ್ಲಿ ಕೆ.ಎಲ್.ರಾಹುಲ್ ಜೊತೆಯಾದ ಸೂರ್ಯ ಕುಮಾರ್ ಯಾದವ್ ಟೀಂ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ದರು. ಕೆ.ಎಲ್.ರಾಹುಲ್ 56 ಎಸೆತಗಳಲ್ಲಿ 51 ರನ್ ಗಳಿಸಿದ್ರೆ, ಸೂರ್ಯ ಕುಮಾರ್ ಯಾದವ್ 33 ಎಸೆತಗಳಲ್ಲಿ 50 ರನ್ ಗಳಿಸಿದರು.
ಇದಕ್ಕೂ ಮುನ್ನಾ ಬ್ಯಾಟ್ ಮಾಡಿದ ದಕ್ಷಿಣಾಫ್ರಿಕಾಗೆ ಟೀಂ ಇಂಡಿಯಾದ ಆರಂಭಿಕ ಬೌಲರ್ ಗಳು ದುಸ್ವಪ್ನವಾದರು.
ಕೇವಲ 9 ರನ್ ಗಳಿಸುಷ್ಟರಲ್ಲಿ ದಕ್ಷಿಣಾಫ್ರಿಕಾದ ಐದು ಮಂದಿಯನ್ನು ಪೆವಿಲಿಯನ್ ಗೆ ಕಳುಹಿಸಿದರು.
ಅಂತಿಮವಾಗಿ ಆಫ್ರಿಕಾ ತಂಡ 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳ ನಷ್ಟಕ್ಕೆ 108 ರನ್ ಗಳಿಸಿತು.
ಆಫ್ರಿಕಾ ಪರ ಕೇಶವ್ ಮಹಾರಾಜ್ 41 ರನ್ ಗಳಿಸಿದರು.
ಭಾರತದ ಪರ ಅರ್ಷ್ ದೀಪ್ ಸಿಂಗ್ ಮೂರು ವಿಕೆಟ್ ಪಡೆದರೇ ದೀಪಕ್ ಚಹಾರ್, ಹರ್ಷಲ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
India vs South Africa