Lokayukta | ರಾಜ್ಯದ 9 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು : ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.
ಲೋಕಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ 9 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ರಾಜ್ಯದ ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಬೆಂಗಳೂರು, ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ.

ಮುಖ್ಯವಾಗಿ ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ 20 ಮಂದಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ಮುಂದುವರೆದಿದೆ.








