Rohit Sharma | ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ
ತಿರುವನಂತಪುರಂ ವೇದಿಕೆಯಾಗಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.
ಆದ್ರೆ ಈ ಮ್ಯಾಚ್ ನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟರ್ ಆಗಿ ವಿಫಲರಾದರು.
ಆದ್ರೂ ಪಂದ್ಯ ಗೆಲ್ಲುವುದರೊಂದಿಗೆ ಟಿ 20 ಕ್ರಿಕೆಟ್ ನಲ್ಲಿ ಭಾರತದ ಮಟ್ಟಿಗೆ ದಾಖಲೆ ಬರೆದಿದ್ದಾರೆ. ಈ ವರ್ಷ ರೋಹಿತ್ ಶರ್ಮಾಗೆ ಇದು 16 ನೇ ಟಿ 20 ಗೆಲುವು.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ 20 ಅತ್ಯಧಿಕ ಗೆಲುವುಗಳನ್ನು ದಾಖಲಿಸಿದ ಭಾರತದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.
ಇದಕ್ಕೂ ಮೊದಲು ಈ ಘನತೆಯನ್ನು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
2016 ವರ್ಷದಲ್ಲಿ ಧೋನಿ ಸಾರಥ್ಯದಲ್ಲಿ ಭಾರತ ಕ್ರಿಕೆಟ್ ತಂಡ 15 ಟಿ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.
ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ರೋಹಿತ್ ಗೆಲ್ಲುವ ಮೂಲಕ ಧೋನಿ ದಾಖಲೆಯನ್ನು ಮುರಿದಿದ್ದಾರೆ.








