Siddaramaiah | ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು
ಬೆಂಗಳೂರು : ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಈ ಬಚ್ಚಾ ರಾಹುಲ್ ಗಾಂಧಿ ಮಾತಾಡ್ತಾನೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಗರಂ ಆಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿ.ಎಸ್.ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸವಾಲು ಹಾಕಿದ್ದಾರೆ.

ಪಾಪ, ಬಿ.ಎಸ್.ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.
ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.








