Karnataka bjp – ಮೀಸಲಾತಿ ಹೆಚ್ಚಳ ಸಿದ್ದರಾಮಯ್ಯಗೆ ಬಿಸಿತುಪ್ಪವಾಗಿದೆ
ಬೆಂಗಳೂರು : ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಈಗ ಬಸವರಾಜ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ ಎಂದು ರಾಜ್ಯ ಬಿಜೆಪಿ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇ ತಡ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ.
https://twitter.com/BJP4Karnataka/status/1580793020055797761?s=20&t=eow89ntMNlpevPMcNkuKUQ
ಸಿದ್ದರಾಮಯ್ಯ ಅವರೇ, ತಾವು ಓಟ್ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ?
ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಈಗ ಬಸವರಾಜ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ.

ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ ಕಾಂಗ್ರೆಸ್ ಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು. ಏಕೆ ಈ ದಲಿತ ವಿರೋಧಿ ಮನೋಸ್ಥಿತಿ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ : https://saakshatv.com/bjp-chalawadi-na…-cm-siddaramaiah/








