ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HD Kumaraswamy – ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ?

Mahesh M Dhandu by Mahesh M Dhandu
October 29, 2022
in Newsbeat, Karavali Karnataka, ಕರಾವಳಿ ಕರ್ನಾಟಕ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

HD Kumaraswamy – ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ?

ಬೆಂಗಳೂರು : ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದು, ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ.

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ?

HD Kumaraswamy slams central bjp govt
HD Kumaraswamy slams central bjp govt

ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.

ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು.

ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ  ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ

ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ ಎಂದು ಒತ್ತಾಯಿಸಿದ್ದಾರೆ.

Tags: #Saaksha TVBJPCongressH D KUMARASWAMYJDS
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram