ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Chamarajanagar – ಕೆರೆಗಳಿಗೆ ನೀರು ತಂಬಿಸುವ ಸಮಗ್ರ ಯೋಜನೆ : ಎರಡು ಹಂತದಲ್ಲಿ ಅನುಷ್ಠಾನಕ್ಕೆ ಕ್ರಮ 

Mahesh M Dhandu by Mahesh M Dhandu
November 5, 2022
in Newsbeat, Hale Mysore, ಹಳೇ ಮೈಸೂರು
Chamarajanagar

Chamarajanagar

Share on FacebookShare on TwitterShare on WhatsappShare on Telegram

Chamarajanagar – ಕೆರೆಗಳಿಗೆ ನೀರು ತಂಬಿಸುವ ಸಮಗ್ರ ಯೋಜನೆ : ಎರಡು ಹಂತದಲ್ಲಿ ಅನುಷ್ಠಾನಕ್ಕೆ ಕ್ರಮ 

ಬೆಂಗಳೂರು:  ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ನೂತನ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಬಾಕಿಯಿರುವ ಎಲ್ಲಾ ರೂಪುರೇಷೆಗಳನ್ನು ಅಂತಿಮಗೊಳಿಸಿ ಅನುಮೋದನೆ ಪಡೆದುಕೊಳ್ಳಬೇಕು. ವಿಳಂಬ ಮಾಡದೇ ಯೋಜನೆ ಜಾರಿಗೆ ಮುಂದಾಗಲು ಹಿರಿಯ ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಇದೇ ವೇಳೆ ಆನೆಮಡುವಿನ ಕೆರೆಗೆ ನೀರು ತುಂಬಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚಿಸಿದ ಸಚಿವರು ಯಾವುದೇ ತೊಂದರೆಯಿಲ್ಲದೇ ಆನೆಮಡುವಿನ ಕೆರೆಗೆ ನೀರು ತುಂಬಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

Chamarajanagar - Comprehensive scheme for dewatering lakes
Chamarajanagar – Comprehensive scheme for dewatering lakes

ಈಗಾಗಲೇ ಪ್ರಗತಿಯಲ್ಲಿರುವ ಸುತ್ತೂರು ಏತ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಅಗತ್ಯ ಕ್ರಮ ವಹಿಸಬೇಕು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಮನಗುಡ್ಡ, ಹುಬ್ಬೆ ಹುಣಸೆ ಯೋಜನೆ ಕಾಮಗಾರಿಗಳನ್ನು ಕೈಗೊಂಡು ಕೆರೆಗಳನ್ನು ತುಂಬಿಸುವ ಯೋಜನೆಯ ಪ್ರಗತಿಗೂ ಮುಂದಾಗಬೇಕು. ಜಿಲ್ಲೆಯಲ್ಲಿ ಬಾಕಿ ಇರುವ ಕೆರೆ ತುಂಬಿಸುವ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.ನಿಜಗುಣ ರಾಜು, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‍ಸಿಂಗ್, ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮೃತ್ಯುಂಜಯಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಕಾವೇರಿ ನೀರಾವರಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್ ವೆಂಕಟೇಶ್, ಅಧೀಕ್ಷಕ ಎಂಜಿನಿಯರ್ ಶಿವಮಾದಯ್ಯ, ಕಾರ್ಯಪಾಲಕ ಎಂಜಿನಿಯರ್ ಎಂ.ಬಿ. ಪಾಟೀಲ್, ವೆಂಕಟೇಶ್ ಪ್ರಭು, ಕಿಶೋರ್, ಈಶ್ವರ್, ಮಂಜುನಾಥ್, ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Tags: #Saaksha TVChamarajanagarav somanna
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram