BJP – ಆಂತರಿಕ ಕಲಹದಿಂದ ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ
ಬೆಂಗಳೂರು : ಬಿಜೆಪಿ ಪಕ್ಷದ ಸಾಧನೆ ಮತ್ತು ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹದಿಂದ ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ ಎಂದು ರಾಜ್ಯ ಬಿಜೆಪಿ ಭವಿಷ್ಯ ನುಡಿದಿದೆ.
ಪೀಣ್ಯ ದಾಸರಹಳ್ಳಿ ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರ ಕಾರ್ಯಗಾರದಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಚುನಾವಣೆ ಸನಿಹದಲ್ಲಿ ಡಿ.ಕೆ.ಶಿವಕುಮಾರ್ ಬಣದ ಕೈ ಮೇಲಾಗುತ್ತಿರುವುದನ್ನು ಸಿದ್ದರಾಮಯ್ಯ ಬಣಕ್ಕೆ ಸಹಿಸಲಾಗುತ್ತಿಲ್ಲ.

ಇವರೇ ಸೃಷ್ಟಿಸಿದ ಬಣಗಳೂ ಕಾದಾಡುತ್ತಿವೆ. ಬಿಜೆಪಿ ಪಕ್ಷದ ಸಾಧನೆ ಮತ್ತು ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹದಿಂದ ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ.
ಕಳೆಗುಂದಿದ್ದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಶೀತಲ ಸಮರಕ್ಕೆ ಈಗ ರೋಚಕ ಟ್ವಿಸ್ಟ್ ಲಭಿಸಿದೆ.
ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರನ್ನು ಸೋಲಿಸಲು ಕಾಂಗ್ರೆಸ್ಸಿಗರೇ ಟೊಂಕ ಕಟ್ಟಿ ನಿಲ್ಲುತ್ತಾರೆ ಎಂದು ನಾವು ಈ ಹಿಂದೆಯೇ ಹೇಳಿದ್ದೆವು. ನಮ್ಮ ಮಾತಿಗೆ ಈಗ ಸಾಕ್ಷ್ಯ ಲಭಿಸುತ್ತಿದೆ ಎಂದು ಬಿಜೆಪಿ ಕುಟುಕಿದೆ.








