ಬೆಳಗಾವಿ ಎಲೆಕ್ಷನ್ | ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ : ಮುತಾಲಿಕ್ ( Mutalik )ವಿಶ್ವಾಸ
ಹುಬ್ಬಳ್ಳಿ : ಬೆಳಗಾವಿ ಲೋಕಸಭಾ ಉಪಚುನವಾಣೆಯಲ್ಲಿ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.
ಶೇಕಡಾ 90 ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಉಪಚುನಾವಣೆ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ನಾನು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ.
ಟಿಕೆಟ್ ವಿಚಾರವಾಗಿ ನಾನು ಬಿಜೆಪಿಯ ಎಲ್ಲ ಪ್ರಮುಖರನ್ನು ಭೇಟಿ ಮಾಡಿದ್ದೇನೆ.
ಎಲ್ಲರೂ ಸಹ ಕೋರ್ ಕಮೀಟಿ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ, ಶೇ.90 ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಒಂದು ವೇಳೆ ಟಿಕೆಟ್ ಸಿಗದಿದ್ದರೆ ರಾಜಕೀಯ ಬೆಳವಣಿಗೆ ಆಗಬಹುದು.
ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಯಾರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆಯೋ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.